ರಾಜ್ಯದಲ್ಲಿ 10ನೇ ತರಗತಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪಿಯುಸಿ ವಿದ್ಯಾರ್ಥಿಗಳು

ಬೆಂಗಳೂರಿನಲ್ಲಿ 10ನೇ ತರಗತಿ ಬಾಲಕನ ಮೇಲೆ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಬನ್ನೇರುಘಟ್ಟ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ಸೆ.3 ರಿಂದ 6 ವರೆಗೆ ಪಿಯುಸಿ ವಿದ್ಯಾರ್ಥಿಗಳು 10ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಕೃತಿ ಮರೆದಿದ್ದಾರೆ ಎನ್ನಲಾಗಿದೆ. ಇಂದು ಸಂತ್ರಸ್ತ ವಿದ್ಯಾರ್ಥಿಯ ಪೋಷಕರು ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ಐವರು ವಿದ್ಯಾರ್ಥಿಗಳು, ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

సంబంధిత పోస్ట్